ಜ್ಯೋತಿಷಿ ಮನೆಗೆ ನುಗ್ಗಿ ಹಲ್ಲೆ : ಹಣ, ಚಿನ್ನಾಭರಣ ದೋಚಿ ಪರಾರಿ
ಬೆಂಗಳೂರು : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಭೀಕರ ಕೊಲೆ ಪ್ರಕರಣ ಮಾಸುವ ಮುನ್ನವೆ ಬೆಂಗಳೂರಿನಲ್ಲಿ ಹಾಡುಹಗಲೇ ಜ್ಯೋತಿಷಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ಹಣವನ್ನು ದೋಚಿ ಪರಾರಿಯಾಗುರುವ ಘಟನೆ ನಡೆದಿದೆ.
ಘಟನೆ ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಜ್ಯೋತಿಷಿ ಮನೆಗೆ ಜ್ಯೋತಿಷ್ಯ ಕೇಳಲು ಬಂದ ಕಳ್ಳರು ಪ್ರಮೋದ್ ಅವರ ಮೇಲೆ ಹಲ್ಲೆ ಬಡೆಸಿದ್ದಾರೆ. ಮನೆಯಲ್ಲಿದ್ದ ಚಿನ್ನಾಭರಣ ಸೇರಿದಂತೆ 5 ಲಕ್ಷ ಹಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಘಟನೆ ಸಂಪೂರ್ಣ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನೂ ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.