ಗುರೂಜಿ ಮರಣೋತ್ತರ ಪರೀಕ್ಷೆ ವರದಿ : ಒಟ್ಟು ಎಷ್ಟು ಬಾರಿ ಚಾಕುವಿಂದ ಇರಿದಿದ್ದಾರೆ ಗೊತ್ತಾ…?
ಹುಬ್ಬಳ್ಳಿ : ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ ಹತ್ಯೆ ನಡೆದು 24 ಗಂಟೆ ಕಳೆದಿದ್ದು ಅವರ ಮರಣೋತ್ತರ ಪರೀಕ್ಷೆಯಲ್ಲಿ ಅಚ್ಚರಿ ಅಂಶ ಬಳಕೆಗೆ ಬಂದಿದೆ.
ಹುಬ್ಬಳ್ಳಿ ಖಾಸಗಿ ಹೊಟೇಲ್ ನಲ್ಲಿ ಚಂದ್ರಶೇಖರ ಗುರೂಜಿ ಹತ್ಯೆ ನಡೆದಿತ್ತು. ಈ ಸಂದರ್ಭದಲ್ಲಿ ಗುರೂಜಿ ಕುತ್ತಿಗೆಯನ್ನು ಚಾಕುವಿನಿಂದ ಇರಿದಿದ್ದ ಹಂತಕರು 12 ಇಂಚಿನಷ್ಟು ಕೊಯ್ದು ವಿಕೃತಿ ಮೆರೆದಿದ್ದರು. ಅಷ್ಟೇ ಅಲ್ಲದೆ, ಚಾಕು 2-3 ಇಂಚಿನಷ್ಟು ಒಳಗೆ ಹೋಗಿ ಗಾಯವುಂಟಾಗಿದ್ದು.
ಇರಿದ ಜಾಗದಲ್ಲೇ 2-3 ಬಾರಿ ಇರಿದಿದ್ದಾರೆ. ಒಟ್ಟು 42 ಕಡೆಗಳಲ್ಲಿ ಇರಿದ ಗಾಯಗಳಿವೆ. ಇದು ಮರಣೋತ್ತರ ಪರೀಕ್ಷೆ ವೇಳೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ ಗುರೂಜಿ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಶವವನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಕೆಲವೇ ನಿಮಿಷಗಳಲ್ಲಿ ಕೊಂಡೊಯ್ಯಲಿದ್ದಾರೆ. ಶವಾಗಾರ ಬಳಿ ಗುರೂಜಿಯ ಕುಟುಂಬಸ್ಥರು, ಸಂಬಂಧಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ಜಮಾಯಿಸಿದ್ದಾರೆ.