Select Page

ಕನ್ನಡದಲ್ಲೇ ಕುಮಾರಣ್ಣ ಪ್ರಮಾಣವಚನ ಸ್ವೀಕಾರ

ಕನ್ನಡದಲ್ಲೇ ಕುಮಾರಣ್ಣ ಪ್ರಮಾಣವಚನ ಸ್ವೀಕಾರ

ನವದೆಹಲಿ : ಹರದನಹಳ್ಳಿ ದೇವೆಗೌಡ ಕುಮಾರಸ್ವಾಮಿ ಎಂಬ ಹೆಸರಿನವನಾದ ನಾನು ಎಂದು ಪ್ರಾರಂಭಿಸಿ 18 ನೇ ಲೋಕಸಭೆಯ ಸಂಸದ್ ಪ್ರತಿನಿಧಿಯಾಗಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದರು.

18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಪ್ರಾರಂಭವಾಗಿದೆ. ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಮಂಡ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.

ನೂತನ ಸಂಸದರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ಕೇಂದ್ರ ಸಚಿವರಾದ ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದರು.

Advertisement

Leave a reply

Your email address will not be published. Required fields are marked *

error: Content is protected !!