Select Page

Advertisement

ಜೈಲಿನಿಂದ ಹೊರಬಂದ ರೇವಣ್ಣ ; ಸಂಭ್ರಮಾಚರಣೆ ಬೇಡ ಎಂದ ಕುಮಾರಣ್ಣ

ಜೈಲಿನಿಂದ ಹೊರಬಂದ ರೇವಣ್ಣ ; ಸಂಭ್ರಮಾಚರಣೆ ಬೇಡ ಎಂದ ಕುಮಾರಣ್ಣ

ಬೆಂಗಳೂರು : ಮಹಿಳೆಯನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಂದು ಬಿಡುಗಡೆ ಹೊಂದಿದ್ದಾರೆ. ಇನ್ನೂ ಸಹೋದರನ ಬಿಡುಗಡೆ ಆಗುತ್ತಿದ್ದಂತೆ ಕುಮಾರಸ್ವಾಮಿ ಸಂಭ್ರಮಾಚರಣೆ ಮಾಡದಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಈ ನಡುವೆ ಜಾಮೀನು ಪ್ರಕ್ರಿಯೆಗಳುಯ ಎಲ್ಲವೂ ಕೂಡ ಆದ ಬಳಿಕ ಇಂದು ಹೆಚ್‌.ಡಿ ರೇವಣ್ಣನವರು ಪರಪ್ಪನ ಅಗ್ರಹಾರದಲ್ಲಿರುವ ಜೈಲನಲ್ಲಿನಿಂದ ಹೊರ ಬಂದರು. ಈ ನಡುವೆ ಅವರ ಅಭಿಮಾನಿಗಳು ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು.

ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಷರತ್ತುಗಳ ಮೇಲೆ ಜಾಮೀನು ನೀಡಿದೆ.

Advertisement

Leave a reply

Your email address will not be published. Required fields are marked *

error: Content is protected !!