ಹಾರೂಗೇರಿ : ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿ ; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
ರಾಯಬಾಗ : ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೂಡಂಗಡಿಗಳ ಮೇಲೆ ಪಲ್ಟಿ ಆಗಿರುವ ಘಟನೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ ಆಗಿದೆ. ಹಾರೂಗೇರಿ – ರಾಯಬಾಗ ರಸ್ತೆಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯಲ್ಲಿ ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು, ಹಾರೂಗೇರಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿನೀಡಿ ರಸ್ತೆ ಮೇಲೆ ಬಿದ್ದಿದ್ದ ಕಬ್ಬು ಸ್ಥಳಾಂತರ ಮಾಡಲಾಗುತ್ತಿದೆ.