
ಗಣೇಶ ವಿಸರ್ಜನೆ ವೇಳೆ ದುರಂತ ; ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಬೆಳಗಾವಿ : ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ನಿಯಂತ್ರಣ ಕಳೆದುಕೊಂಡ ಬೃಹತ್ ಲಾರಿ ಜನರ ಮೇಲೆ ಹರಿದ ಪರಿಣಾಮ ಸಾವಿನ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.
ಹಾಸನ ತಾಲ್ಲೂಕಿನ, ಮೊಸಳೆಹೊಸಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು ಏಕಾಏಕಿ ಜನರ ಮೇಲೆ ಟ್ರಕ್ ಹರಿದಿದೆ. ಈ ವೇಳೆ ಮೆರವಣಿಗೆ ಜೊತೆ ಸಾಗುತ್ತಿದ್ದ ಒಂಬತ್ತು ಜನ ಮೃತಪಟ್ಟಿದ್ದು 20 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರ ವಿವರ :
1. ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ
2. ರಾಜೇಶ (17) ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು
3. ಈಶ್ವರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲ್ಲೂಕು
4. ಗೋಕುಲ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು
5. ಕುಮಾರ (25 ) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
6. ಪ್ರವೀಣ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
7. ಮಿಥುನ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ.
8. ಸುರೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ
9. ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕು