ಹೆಲ್ಮೆಟ್ ಧರಿಸದೆ ಬುಲೆಟ್ ಚಾಲನೆ ; ಅಪಘಾತದಲ್ಲಿ ಯುವತಿ ಸಾವು…!

ಹಾಸನ : ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್ ಚಾಲನೆ ಮಾಡುವ ವೇಳೆ ಅಪಘಾತ ಸಂಭವಿಸಿದ್ದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಪ್ರೀಯಾ (23) ಮೃತ ಯುವತಿ. 24 ವರ್ಷದ ಸ್ವಾತಿ ಎಂಬುವವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಂಚರಿಸುವ ವೇಳೆ ಅಪಘಾತ ಸಂಭವಿಸಿದೆ. ಇಬ್ಬರೂ ವಿದ್ಯಾರ್ಥಿನಿಯರು ಎಂಸಿಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಗಾಯಾಳು ಯುವತನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿದ್ದಾರೆ.


