ಹೃದಯಾಘಾತ SSLC ವಿದ್ಯಾರ್ಥಿ ಸಾವು
SSLC ಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.
16 ವರ್ಷದ ರಾಹುಲ್ ಮೃತ ವಿದ್ಯಾರ್ಥಿ. ಚಿಕ್ಕನಾಯಕನಹಳ್ಳಿ ಪಟ್ಟಣದ ಜಿ ಹೆಚ್ ಎಸ್ ನಲ್ಲಿ 10ನೇ ತರಗತಿ ಓದುತ್ತಿದ್ದ. ತಡರಾತ್ರಿ ಎದೆನೋವಿನಿಂದ ಬಳಲುತ್ತಿದ್ದ ರಾಹುಲ್ ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.


