ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಭರ್ಜರಿ ಬಾಡೂಟ
ಬೆಳಗಾವಿ : ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ನಡೆದ ಎಸ್ಸಿ ಎಸ್ಟಿ ಸಮಾವೇಶದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿದೆ.
ಈಗಾಗಲೇ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗಿರುವ ರಮೇಶ್ ಜಾರಕಿಹೊಳಿ ಅನೇಕ ಕಾರ್ಯಕ್ರಮ ಆಯೋಜಿಸಿದ್ದಾರೆ. ಜೊತೆಗೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಭರ್ಜರಿ ಬಾಡೂಟ ನೀಡುವ ಮೂಲಕ ಸೆಡ್ಡು ಹೊಡೆದಿದ್ದಾರೆ.