ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಸದ ಹೆಗಡೆ ವಿರುದ್ಧ ಕೇಸ್ ದಾಖಲು
ಕುಮಟಾ : ಸಿಎಂ ಸಿದ್ದರಾಮಯ್ಯ ಕುರಿತು ಏಕವಚನದಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ( Anantkumar hegade ) ವಿರುದ್ಧ ಕುಮಟಾದಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದಾರೆ.
ದ್ವೇಷ ಭಾಷಣ ಮಾಡಿದ್ದಾರೆ ಎಂದು ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 ಹಾಗೂ 153 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಂಸದ ಅನಂತ ಕುಮಾರ್ ಹೆಗಡೆ, ಬಾಬರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದಪಳ್ಳಿ ಮಸೀದಿ ನಿರ್ನಾಮ ಮಾಡುತ್ತೇವೆ. ಎಲ್ಲೆಲ್ಲಿ ದೇವಸ್ಥಾನಗಳನ್ನು ಒಡೆದು ಮಸೀದಿ ನಿರ್ಮಿಸಿದ್ದಾರೋ ಅಲ್ಲೆಲ್ಲ ಮಸೀದಿ ನಿರ್ನಾಮಮಾಡಿ ದೇವಸ್ಥಾನ ನಿರ್ಮಿಸುತ್ತೇವೆ.
ಸಾವಿರಾರು ವರ್ಷಗಳ ಸೇಡು ಇದು ಸೇಡಿಗೆ ಸೇಡು. ಋಣ ತೀರಿಸದಿದ್ದರೆ ಹಿಂದೂ ರಕ್ತ ಎನ್ನಲ್ಲ ಎಂದು ಆಕ್ರೋಶಭರಿತರಾಗಿ ಮಾತನಾಡಿದ್ದರು. ಅಲ್ಲದೇ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಸಂಸದ ಭಾಷಣ ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಇದೀಗ ಸಂಸದರ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ


