ರಾಜ್ಯ ಗುಪ್ತಚರ ದಳದ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ನೇಮಕ
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರಿಗೆ ರಾಜ್ಯ ಗುಪ್ತಚರ ದಳ ಇಲಾಖೆಯ ಎಡಿಜಿಪಿಯಾಗಿ ನೇಮಕ ಮಾಡಿ ಶುಕ್ರವಾರ ಸರಕಾರ ಆದೇಶ ಹೊರಡಿಸಿದೆ.
ಗುಪ್ತಚರ ದಳದ ಎಡಿಜಿಪಿ ಶರತ್ ಚಂದ್ರ ಅವರ ಜಾಗಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಜೊತೆಗೆ ಹೇಮಂತ್ ನಿಂಬಾಳ್ಕರ್ ಅವರಿಗೆ ಮತ್ತೊಂದು ಮಹತ್ತರ ಜವಾಬ್ದಾರಿಯನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಗುಪ್ತಚರ ದಳದ ಎಡಿಜಿಪಿ ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷಾ ಮುಖ್ಯಸ್ಥರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.