ಪ್ರಧಾನಿ ನರೇಂದ್ರ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು
ಗುಜರಾತ್ : ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಇಂದು ಗುಜರಾತಿನ ಅಹಮದಾಬಾದ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ಮೋದಿ ತಾಯಿ ಹೀರಾಬೆನ್ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಒಡೆಯುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗುಜರಾತಿನ ಅನೇಕ ಶಾಸಕರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ.
ನಿನ್ನೆಯಷ್ಟೇ ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿತ್ತು. ಸಧ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.