Job Alert : ಹೆಸ್ಕಾಂ ನಲ್ಲಿ 248 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುಬ್ಬಳ್ಳಿ : ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಖಾಲಿ ಇರುವ 248 ಅಪ್ರೆಂಟಿಸ್ ಟ್ರೇನಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಸೆ. 10 – 2023 ಅರ್ಜಿ ಸಲ್ಲಿಸುವ ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ https://hescom.karnataka.gov.in ಭೇಟಿ ನೀಡಬಹುದು.
ಶೈಕ್ಷಣಿಕ ಅರ್ಹತೆ : ಹೆಸ್ಕಾಂ ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಐಟಿಐ ( ITI ) ಪೂರ್ಣ ಮಾಡಿರಬೇಕು.
ವಯೋಮಿತಿ : ಅಭ್ಯರ್ಥಿಯ ಗರಿಷ್ಠ ವಯಸ್ಸು ಆ. 26 ಕ್ಕೆ 25 ವರ್ಷ. ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ಇದೆ. ಅರ್ಜಿ ಶುಲ್ಕ 100 ರೂ. ಇದೆ.


