BREAKING : ಬುಧವಾರದಿಂದ PUC ಹಾಗೂ ಡಿಗ್ರಿ ಕಾಲೇಜು ಪ್ರಾರಂಭ
ಬೆಂಗಳೂರು : ಹಿಜಾಬ್ ವಿವಾದದಿಂದ ಬಂದ್ ಆಗಿದ್ದ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳು ಬರುವ ಬುಧವಾರ ದಿನಾಂಕ ಫೆ.16 ರಂದು ಪ್ರಾರಂಭಿಸುವುದಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಹಿಜಾಬ್ ಹಾಗೂ ಕೇಸರಿ ಶಾಲು ವಿವದ ಹೈಕೋರ್ಟ್ ಮೆಟ್ಟಿಲೇರಿದ್ದು ಕೋರ್ಟ್ ಆದೇಶ ಬರುವವರೆಗೂ ಶಾಲಾ ಕೇಜುಗಳನ್ನು ಪ್ರಾರಂಭಿಸಬೇಕೆಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಸಭೆ ನಡೆಸಿದ ನಂತರ ಮಾಹಿತಿ ನಿಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್. ಬರುವ ಬುಧವಾರದಿಂದ ರಾಜ್ಯಾದ್ಯಂತ ಬಂದ್ ಆಗಿರುವ ಪಿಯು ಹಾಗೂ ಡಿಗ್ರಿ ಕಾಲೇಜು ಪ್ರಾರಂಭವಾಗುತ್ತವೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಶಾಲಾ ಕಾಲೇಜುಗಳಿಗೆ ಬರುವಂತೆ ಹೇಳಿದ್ದಾರೆ.
ಹೈಕೋರ್ಟ್ ಆದೇಶದ ಪ್ರಕಾರ ಶಾಲಾ ಕಾಲೇಜುಗಳಲ್ಲಿ ಬರುವ ಮಕ್ಕಳು ಹಿಜಾಬ್ ಹಾಗೂ ಕೇಶರಿ ಶಾಲು ಹಾಕುವಂತಿಲ್ಲ. ಮುಂದಿನ ಆದೇಶದವರೆಗೆ ಯಥಾ ಪ್ರಕಾರ ಕಾಯ್ದುಕೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿದೆ.