Select Page

Advertisement

ಹಿಜಾಬ್ ನಿಷೇಧ ವಾಪಸ್ ; ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕುವಂತೆ ಬಿಜೆಪಿ ನಾಯಕರ ಕರೆ

ಹಿಜಾಬ್ ನಿಷೇಧ ವಾಪಸ್ ; ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕುವಂತೆ ಬಿಜೆಪಿ ನಾಯಕರ ಕರೆ

ಬೆಂಗಳೂರು : ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿದ್ದನ್ನು ಸಧ್ಯ ಸಿಎಂ ಸಿದ್ದರಾಮಯ್ಯ ವಾಪಸ್ ಪಡೆಯುವ ಮೂಲಕ ಮತ್ತೊಮ್ಮೆ ಶಾಲೆಗಳಲ್ಲಿ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದ್ದು ಸಧ್ಯ ಎಲ್ಲೆಡೆ ವಿವಾದ ವ್ಯಕ್ತವಾಗುತ್ತಿದೆ. ಇತ್ತ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತಿದ್ದಂತೆ ಅತ್ತ ಕೇಸರಿ ಶಾಲು ಹಾಕಿ ವಿದ್ಯಾರ್ಥಿಗಳು ಶಾಲೆಗೆ ಬರುವಂತೆ ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ‌.

ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದಂತೆಯೇ, ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ತಾರಕಕ್ಕೇರಿದೆ. ಮತ್ತೊಂದೆಡೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಯತ್ನಾಳ್, ಸಿದ್ದರಾಮಯ್ಯ ಹಿಜಾಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ. ಅವರಿಗಿಲ್ಲದ ಸಮವಸ್ತ್ರ ನೀತಿ ಹಿಂದೂಗಳಿಗೂ ಇಲ್ಲ ಎಂದಿದ್ದಾರೆ.

ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ ಸಿದ್ದರಾಮಯ್ಯನವರಿಗೆ ಮಾಹಿತಿಯ ಕೊರತೆ ಇದೆ, ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿ ಯಾವ ಆದೇಶವೂ ಇಲ್ಲ, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನೀತಿಯನ್ನು ಜಾರಿ ಮಾಡಿದ್ದು ಸ್ಥಳೀಯ ಕಾಲೇಜುಗಳು ನಿರ್ಧಾರ ಮಾಡಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹೇಳಿತ್ತು.

Advertisement

Leave a reply

Your email address will not be published. Required fields are marked *

error: Content is protected !!