
BREAKING : ಶಾಲಾ ಸಮವಸ್ತ್ರ ಕಡ್ಡಾಯ – ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ದೇಶಾದ್ಯಂತ ಚರ್ಚೆ ಭಾಗವಾಗಿದ್ದ ಹಿಜಾಬ್ ವಿವಾದಕ್ಕೆ ಹೈಕೋರ್ಟ್ ಪೂರ್ಣವಿರಾಮ ಹಾಕಿದ್ದು ವಿದ್ಯಾರ್ಥಿಗಳು ಹಿಜಾಬ್ ಹಾಕಿ ಶಾಲಾ ಕಾಲೇಜಿಗೆ ತೆರಳದಂತೆ ಆದೇಶ ಹೊರಡಿಸಿದ್ದು, ಸಮವಸ್ತ್ರ ಕಡ್ಡಾಯಗೊಳಿಸಿದ್ದ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ.
ಶಾಲೆಯಲ್ಲಿ ಸಮವಸ್ತ್ರ ನಿಯಮವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಾಲಿಸಬೇಕು. ಸಮವಸ್ತ್ರ ಸಂಹಿತೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿನಿಯರು ಪಾಲಿಸಬೇಕು ಎಂದು ಕೋರ್ಟ್ ಆದೇಶ ಹೊರಡಿಸಿದೆ. ಒಟ್ಟಿನಲ್ಲಿ ಹಿಜಾಬ್ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ.