ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ
ಹಾಸನ : ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.
ಹೇಮಾವತಿ ನದಿಗೆ ಹೊಳೆನರಸೀಪುರ ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಸತ್ತಾರ (79 ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಯಕ್ತಿಕ ಹಣಕಾಸು ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ನದಿಗೆ ಜಿಗಿಯುವ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಈವರೆಗೆ ಶವ ಪತ್ತೆಯಾಗದ ಹಿನ್ನಲೆಯಲ್ಲಿ ಕುಂದಾಪುರ ಮುಳುಗು ತಜ್ಞರಿಂದ ಶೋಧ ಕಾರ್ಯಾಚರಣೆ ಮುಂದುವರಿದೆ. ಹೊಳೆನರಸೀಪುರ ಪೊಲೀಸ್ ಭಾಷೆಯಲ್ಲಿ ಪ್ರಕರಣ ನಡೆದಿದೆ.


