
ಅತ್ಯಾಚಾರಿ ಎನ್ಕೌಂಟರ್ : ಬೆಳಗಾವಿ ಮನೆ ಮಗಳು PSI ಅನ್ನಪೂರ್ಣ

ಬೆಳಗಾವಿ : ಹುಬ್ಬಳ್ಳಿ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ಎನ್ಕೌಂಟರ್ ನಲ್ಲಿ ಸಾಯಿಸಿರುವ ಹುಬ್ಬಳ್ಳಿ ಪೊಲೀಸರ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಹೌದು ಭಾನುವಾರ ಬೆಳಿಗ್ಗೆ 10.40ರ ಸುಮಾರಿಗೆ ಹುಬ್ಬಳ್ಳಿಯ ವಿಜಯನಗರದಲ್ಲಿ ಐದು ವರ್ಷದ ಮಗು ನಾಪತ್ತೆಯಾದ ಕುರಿತು ಪ್ರಕರಣ ದಾಖಲಾಗಿತ್ತು. ನಂತರ, ಮಗು ನಾಪತ್ತೆಯಾದ ಸ್ಥಳದ ಎದುರಿರುವ ಶೆಡ್‌ನಲ್ಲಿ ಮೃತದೇಹ ಪತ್ತೆಯಾಗಿತ್ತು.
ಸಿಸಿಟಿವಿಯಲ್ಲಿ ಗಮನಿಸಿದ ಸಂದರ್ಭದಲ್ಲಿ ಆರೋಪಿ ಬಾಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಬಯಲಾಗಿದೆ. ಬಂಧಿತ ಆರೋಪಿಯನ್ನು ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ.
ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ. ಸಧ್ಯ ಈ ಪಿಎಸ್ಐ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಇನ್ನೂ ಪಿಎಸ್ಐ ಅನ್ನಪೂರ್ಣ ಅವರು ಬೆಳಗಾವಿ ಮೂಲದ ಹೆಣ್ಣುಮಗಳಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುಜನಟ್ಟಿ ಗ್ರಾಮದ ಅನ್ನಪೂರ್ಣ ಅವರು ವಿದ್ಯಾಕಾಶಿ ಧಾರವಾಡದಲ್ಲಿ ಬಿ ಎಸ್ಸಿ ಅಗ್ರಿಕಲ್ಚರ್ ಮುಗಿಸಿ ನಂತರ ಬೆಂಗಳೂರಿನಲ್ಲಿ ಎಂ ಎಸ್ಸಿ ಅಗ್ರಿಕಲ್ಚರಲ್ ಮುಗಸಿದ್ದಾರೆ. ಸಧ್ಯ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.