Select Page

Advertisement

ಹುಬ್ಬಳ್ಳಿ : ಅತ್ಯಾಚಾರ ಆರೋಪಿಗೆ ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ

ಹುಬ್ಬಳ್ಳಿ : ಅತ್ಯಾಚಾರ ಆರೋಪಿಗೆ ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ

ಹುಬ್ಬಳ್ಳಿ : ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಹುಬ್ಬಳ್ಳಿಯ ಬಾಲಕಿ ಮೇಲೆ ಅತ್ಯಾಚಾರ ಯತ್ನ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಯಮಲೋಕಕ್ಕೆ ಕಳುಹಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ‌‌.

ಐದು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿದ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿ ಪೊಲೀಸರು ಎನ್‌ಕೌಂಟರ್‌ ಮೂಲಕ ಮುಗಿಸಿದ್ದಾರೆ.

ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ.

ಈ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದಾಗ ಆತನ ಕಾಲಿಗೆ ಹಾಗೂ ಬೆನ್ನಿಗೆ ಗುಂಡು ತಗುಲಿದೆ’ ಎಂದು ಘಟನೆ ಕುರಿತು ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಘಟನೆ ವಿವರ : ಭಾನುವಾರ ಬೆಳಿಗ್ಗೆ 10.40ರ ಸುಮಾರಿಗೆ ವಿಜಯನಗರದಲ್ಲಿ ಐದು ವರ್ಷದ ಮಗು ನಾಪತ್ತೆಯಾದ ಕುರಿತು ಪ್ರಕರಣ ದಾಖಲಾಗಿತ್ತು. ನಂತರ, ಮಗು ನಾಪತ್ತೆಯಾದ ಸ್ಥಳದ ಎದುರಿರುವ ಶೆಡ್‌ನಲ್ಲಿ ಮೃತದೇಹ ಪತ್ತೆಯಾಗಿತ್ತು’ ಎಂದರು.

‘ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿದಾಗ, ಕೃತ್ಯದ ಕುರಿತು ಮಾಹಿತಿ ನೀಡಿದ್ದ. ಆದರೆ, ತನ್ನ ವಿಳಾಸ ಹಾಗೂ ಗುರುತಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿರಲಿಲ್ಲ’ ಎಂದು ಹೇಳಿದರು.

‘ಬಿಹಾರ ಮೂಲದ ಅವನು, ವಿವಿಧ ಊರುಗಳಲ್ಲಿ ಕೆಲಸ ಮಾಡಿದ್ದ. ಹುಬ್ಬಳ್ಳಿಯಲ್ಲೂ ಕೆಲಸ ಮಾಡುತ್ತ, ತಾರಿಹಾಳ ಸೇತುವೆ ಬಳಿಯ ಹಳೇ ಶೆಡ್‌ನಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದ. ಅವನ ಜೊತೆ ಯಾರಿದ್ದಾರೆಂದು ತಿಳಿದುಕೊಳ್ಳಲು, ಅವನನ್ನು ಸ್ಥಳಕ್ಕೆ ಕರೆದುಕೊಂಡು ಹೋದಾಗ ಎನ್‌ಕೌಂಟರ್‌ ನಡೆದಿದೆ’ ಎಂದರು




Advertisement

Leave a reply

Your email address will not be published. Required fields are marked *

error: Content is protected !!