Select Page

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ : ಸಾವಿನ ಸಂಖ್ಯೆ 11 ಕ್ಕೆ ಏರಿಕೆ

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ : ಸಾವಿನ ಸಂಖ್ಯೆ 11 ಕ್ಕೆ ಏರಿಕೆ

ತಮಿಳುನಾಡು : ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 14 ಜನ ಸಂಚರಿಸುತ್ತಿದ್ದ ಸೇನಾ ಹೆಲಿಕಾಪ್ಟರ್ (ಎಂಐ – 17)ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದ್ದು. ಸಾವಿನ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ. (IAF_Chopper_Crash _Updates)

ಹೊತ್ತಿ ಉರಿಯುತ್ತಿರುವ ಸೇನಾ ಹೆಲಿಕಾಪ್ಟರ್

ಸಿಡಿಎಸ್ ( Chief of Defence Staff General Bipin Rawat ) ಸೇರಿದಂತೆ ಅವರ ಪತ್ನಿ ಹಾಗೂ ಸೇನೆಯ ಅಧಿಕಾರಿಗಳು ಸೇರಿದಂತೆ ಒಟ್ಟು 14 ಜನ ಸಂಚರಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಪ್ರತಿಕೂಲ ವಾತಾವರಣದಿಂದ ಈ ಘಟನೆ ನಡೆದಿದ್ದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಚಿಂತಾಜನಕವಾಗುದೆ ಎಂದು ಪ್ರಾಥಮಿಕ ಮೂಲಗಳ ಮಾಹಿತಿ ಪ್ರಕಾರ ತಿಳಿದುಬಂದಿದೆ.

ದುರ್ಘಟನೆಯಲ್ಲಿ ೧೧ ಜನರ ಸಾವು‌

ಹವಾಮಾನ ವೈಪರೀತ್ಯದಿಂದ ಈ ದುರ್ಘಟನೆ ಸಂಭವಿಸಿದ್ದು ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಸಧ್ಯ ಈ
ದುರ್ಘಟನೆಯಲ್ಲಿ ಗಾಯಗೊಂಡವರನ್ನು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ನಂತರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ದೆಹಲಿಯಿಂದ ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದಾರೆ. ಇತ್ತ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮೀತ್ ಶಾ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!