VIDEO : ಸೇನಾ ಹೆಲಿಕಾಪ್ಟರ್ ದುರಂತದ ಭೀಕರ ದೃಶ್ಯ
ತಮಿಳುನಾಡು : ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 14 ಜನ ಸಂಚರಿಸುತ್ತಿದ್ದ ಸೇನಾ ಹೆಲಿಕಾಪ್ಟರ್ (ಎಂಐ – 17) ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದ್ದು. ಸಾವಿನ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ. ಜೊತೆಗೆ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ರಾವತ್ ಸಾವನಪ್ಪಿದ್ದಾರೆ.
ಸಿಡಿಎಸ್ ( Chief of Defence Staff General Bipin Rawat ) ಸೇರಿದಂತೆ ಅವರ ಪತ್ನಿ ಹಾಗೂ ಸೇನೆಯ ಅಧಿಕಾರಿಗಳು ಸೇರಿದಂತೆ ಒಟ್ಟು 14 ಜನ ಸಂಚರಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಪ್ರತಿಕೂಲ ವಾತಾವರಣದಿಂದ ಈ ಘಟನೆ ನಡೆದಿದ್ದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸಾವನಪ್ಪಿದ್ದಾರೆ.
ಹವಾಮಾನ ವೈಪರೀತ್ಯದಿಂದ ಈ ದುರ್ಘಟನೆ ಸಂಭವಿಸಿದ್ದು ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಸಧ್ಯ ಈ
ದುರ್ಘಟನೆಯಲ್ಲಿ ಗಾಯಗೊಂಡವರನ್ನು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
iaf_chopper_crash_updates_Tamilnaadu_Bipin_Rawats
ಈ ಘಟನೆ ನಂತರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ದೆಹಲಿಯಿಂದ ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದಾರೆ. ಇತ್ತ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮೀತ್ ಶಾ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.