ಹೃದಯಾಘಾತದಿಂದ ಪ್ರವಚನಕಾರ ಇಬ್ರಾಹಿಂ ಸುತಾರ್ ನಿಧನ
ಬಾಗಲಕೋಟೆ : ಖ್ಯಾತ ವಚನಕಾರರ ಹಾಗೂ ಪದ್ಮಶ್ರೀ ಪುರಸ್ಕೃತ . ಇಬ್ರಾಹಿಂ ಸುತಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶನಿವಾರ ಬೆಳಗಿನ ಜಾವ ಸಂಭವಿಸಿದ ಲಘು ಹೃದಯಾಘಾತದಿಂದ ಇಬ್ರಾಹಿಂ ಸುತಾರ್ ಶಿವೈಕ್ಯರಾಗಿದ್ದಾರೆ. ಸಮಾಜದಲ್ಲಿ ಕೋಮು ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ತಮ್ಮ ಪ್ರವಚನಗಳ ಮೂಲಕ ಪ್ರಸಿದ್ಧಿ ಹೊಂದಿದ್ದ ಇವರ ಅಗಲಿಕೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಹಲವರಿ ಸಂತಾಪ ಸೂಚಿಸಿದ್ದಾರೆ.
ಇಬ್ರಾಹಿಂ ಸುತಾರ್ ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಇವರು ಮೂಲತಃ ಬಾಗಲಕೋಟೆ ಜಿಲ್ಲೆ ಮಹಾಲಿಂಗಪೂರದವರು. ಕೃಷ್ಣೆಯ ನಾಡಿನ ಕಬೀರ ಎಂದೇ ಪ್ರಖ್ಯಾತಿ ಹೊಂದಿದ್ದರು. ವೈದಿಕ, ವಚನ ಹಾಗೂ ಸೂಫಿ ಪರಂಪರೆ ಸೇರಿದಂತೆ ಭಜನೆ, ಪ್ರವಚನ, ಸಂವಾದಗಳ ಮೂಲಕ ಹೆಸರುವಾಸಿಯಾಗಿದ್ದರು.