ಬಾವುಟ ವಿವಾದ, ಬೆಳಗಾವಿ ಐಜಿಪಿ ನೇತೃತ್ವದಲ್ಲಿ ತನಿಖೆ – ಎಡಿಜಿಪಿ ಅಲೋಕ್ ಕುಮಾರ್
ಬೆಳಗಾವಿ : ಕಾಲೇಜಿನಲ್ಲಿ ಕನ್ನಡ ಬಾವುಟ ಹಾರಿಸಿದ್ದ ಯುವಕನ ಮೇಲೆ ಸಹಪಾಠಿಗಳ ಹಲ್ಲೆ ನಂತರ ಪೊಲೀಸ್ ಠಾಣೆಯಲ್ಲಿ ಹಿರಿಯ ಅಧಿಕಾರಿಗಳಿಂದ ಹಲ್ಲೆ ನಡೆಸಿದ್ದ ಘಟನೆ ಸಂಬಂಧಿಸಿದಂತೆ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಟ್ವಿಟ್ ಮಾಡಿದ್ದಾರೆ.
ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಬೆಳಗಾವಿ ಐಜಿಪಿ ನೇತೃತ್ವದಲ್ಲಿ ತನಿಖೆ ನೆಲಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.