ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಟೋಟ ; ಇಬ್ಬರು ಸಾವು, ಇನ್ನುಳಿದವರ ಸ್ಥಿತಿ ಗಂಭೀರ
ಬೆಳಗಾವಿ : ಸಕ್ಕರೆ ಕಾರ್ಖಾನೆ ಬಾಯ್ಲಯ್ ಸ್ಪೋಟಗೊಂಡಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನುಳಿದವರ ಸ್ಥಿತಿ ಗಂಭೀರವಾಗಿದೆ.
ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯ ಇನಾಮದಾರ್ ಶುಗರ್ಸ್ ಬಾಯ್ಲರ್ ಸ್ಪೋಟಗೊಂಡಿದೆ. ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ. ಆರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ದುರಂತಕ್ಕೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.


