ವಕ್ಫ್ ಪ್ರಕರಣವನ್ನು ಜೆಪಿಸಿ ಗಂಭೀರವಾಗಿ ಪರಿಗಣಿಸಿದೆ ; ಜಗದಾಂಬಿಕಾ ಪಾಲ್
ಬೆಳಗಾವಿ : ರಾಜ್ಯ ಸರ್ಕಾರದ ಆದೇಶದ ಮೇರೆಗೆ ವಕ್ಫ್ ಬೋರ್ಡ್ ನೋಟಿಸ್ ನೀಡದೆ ರೈತರ ಪಹಣಿಯಲ್ಲಿ ಹೆಸರು ಹಾಕಿಕೊಂಡಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಸಾವಿರಾರು ಕೃಷಿ ಭೂಮಿ ಹಾಗೂ ಮಠ, ಮಂದಿರದ ಆಸ್ತಿ ಹೊಡೆಯಲು ಹುನ್ನಾರ ನಡೆಸಲಾಗಿದೆ ಎಂದು
ವಕ್ಫ್ ತಿದ್ದುಪಡಿ ಕಾಯ್ದೆ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ನೂರಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಜಮೀನು ತನ್ನದು ಎಂದು ವಕ್ಫ್ ಬೋರ್ಡ್ ಹೇಳುತ್ತಿದೆ. ಹುಬ್ಬಳ್ಳಿ ಧಾರವಾಡ ಹಾಗೂ ವಿಜಯಪುರದಲ್ಲಿ ಬೇಕಾಬಿಟ್ಟಿಯಾಗಿ ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ತನ್ನ ಹೆಸರು ಸೇರಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಈ ರೀತಿಯ ಗೊಂದಲ ಉಂಟಾಗಿದ್ದು ಜೆಪಿಸಿ ಗಂಭೀರವಾಗಿ ಪರಿಗಣಿಸಿ ವರದಿ ತಯಾರಿಸಲಿದೆ ಎಂದರು.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿ. ದಾಖಲೆಗಳಲ್ಲಿ ನಿಜವಾದ ವಕ್ಫ್ ಆಸ್ತಿ ಇದ್ದರೆ ಅದು ಬೋರ್ಡ್ ಗೆ ಸೇರಲಿ. ಆದರೆ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯದ ಓಲೈಕೆ ಮಾಡುವ ಉದ್ದೇಶದಿಂದ ಈ ಹುನ್ನಾರ ನಡೆಸಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಮಡೆಯಲಿರುವ ಉಪ ಚುನಾವಣೆಯಲ್ಲಿ ಲಾಭ ಪಡೆಯಲು ಈ ರೀತಿಯ ಕೆಲಸಕ್ಕೆ ಮುಂದಾಗಿದೆ ಎಂದರು.
ರಾಜ್ಯದಲ್ಲಿ ವಕ್ಫ್ ಬೋರ್ಡ್ ನಡೆಸಿದ ಅವಾಂತರ ಕುರಿತು ಸಮಗ್ರ ವರದಿ ತಯಾರಿಸಿ ಜೆಪಿಸಿ ಮುಂದೆ ಇಡಲಿದ್ದೇವೆ. ಸಚಿವರ ಆದೇಶದ ಮೇರೆಗೆ ಅನೇಕ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಅನೇಕ ಅಧಿಕಾರಿಗಳು ಬೇಕಾಬಿಟ್ಟಿ ರೈತರ ಜಮೀನಿನಲ್ಲಿ ವಕ್ಫ್ ಬೋರ್ಡ್ ಹೆಸರು ಸೇರಿಸಿದ್ದಾರೆ ಅವರು ಜೆಪಿಸಿ ಮುಂದೆ ಹಾಜರಾಗಿ ಅವರು ಕೇಳುವ ಪ್ರಶ್ನೆಗೆ ಉತ್ತರಿಸಲಿ ಎಂದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ ರಾಜ್ಯದಲ್ಲಿ ರೈತರ ಜಮೀನುಗಳನ್ನು ಕಾಂಗ್ರೆಸ್ ಸರ್ಕಾರ ವಕ್ಫ್ ಹೆಸರಿನಲ್ಲಿ ಕೊಳ್ಳೆ ಹೊಡೆಯಲು ಯತ್ನಿಸಿದೆ. ಇದರಿಂದ ರೈತರು ಭಯದಿಂದ ಇದ್ದಾರೆ. ಕೂಡಲೇ ಜೆಪಿಸಿ ಸಮಗ್ರ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸುವಂತೆ ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಮಾನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಮಹೇಶ್ ತೆಂಗಿನಕಾಯಿ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ್, ಮುಖಂಡರಾದ ಎಫ್, ಎಸ್ ಸಿದ್ದನಗೌಡರ, ಮುರುಘೇಂದ್ರಗೌಡ ಪಾಟೀಲ್, ನಾಗರಾಜ ಗಸ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.