ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ!
ನವದೆಹಲಿ : ಸಂಸತ್ ಅಧಿವೇಶನ ನಡೆಯುತ್ತಿರುವ ಮಧ್ಯೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಅನಾರೋಗ್ಯ ಕಾರಣಕ್ಕೆ ನಾನು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಜಗದೀಪ್ ಧನರಕ್ ಅವರು ರಾಷ್ಟ್ರಪತಿಗೆ ಕೊಟ್ಟ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯಸಭಾ ಸಭಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಗದೀಪ್ ಧನಕರ್ ಅವರು ಅಧಿವೇಶನ ನಡೆಯುತ್ತಿರುವ ವೇಳೆಯಲ್ಲೇ ರಾಜೀನಾಮೆ ನೀಡಿದ್ದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ.


