ಉಪರಾಷ್ಟ್ರಪತಿ ಹುದ್ದೆಗೆ ಎನ್ ಡಿ ಎ ಅಚ್ಚರಿ ಅಭ್ಯರ್ಥಿ ಆಯ್ಕೆ
ನವದೆಹಲಿ : ಉಪರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಅಚ್ಚರಿ ಆಯ್ಕೆ ಮಾಡಿದ್ದು, ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಜಗದೀಪ್ ಧನ್ಕರ್ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ನಡೆದ ಬಿಜೆಪಿ ಸಂಸದಿ ಸಭೆ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಉಪರಾಷ್ಟ್ರಪತಿ ಹುದ್ದೆಗೆ ಎನ್ ಡಿ ಎ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದಾರೆ.
ಜಗದೀಪ್ ಧನ್ಕರ್ ಅವರು ರಾಜಸ್ಥಾನದ ಕಿತಾನ ಹಳ್ಳಿಯ ರೈತ ಕುಟುಂಬದಲ್ಲಿ ಜನಿಸಿದ್ದ ಇವರು, ಮುಂದೆ ರಾಜಕೀಯದಲ್ಲಿ ಬೆಳೆದಿದ್ದು ವಿಶೇಷ. ಎಲ್ ಎಲ್ ಬಿ ಓದಿದ ಇವರು. ಸುಪ್ರೀಂಕೋರ್ಟ್ ನ ಹಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ.
ಅಗಸ್ಟ್ 6 ರಂದು ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು ಈಗಾಗಲೇ ರಾಷ್ಟ್ರಪತಿ ಸ್ಥಾನಕ್ಕೆ ದ್ರೌಪದಿ ಮರ್ಮು ಅವರನ್ನು ಎನ್ ಡಿ ಎ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.
1989 ರಲ್ಲಿ ಜನತಾದಳ ಸೇರ್ಪಡೆ
1990 ಕೇಂದ್ರ ಸಚಿವರಾಗಿ ಸೇವೆ
1993 ರಲ್ಲಿ ರಾಜಸ್ಥಾನದ ಕಿಶನಗರ್ ಕ್ಷೇತ್ರದ ಶಾಸಕರಾಗಿ ಆಯ್ಕೆ
2003 ರಲ್ಲಿ ಬಿಜೆಪಿ ಸೇರ್ಪಡೆ