ಶೆಟ್ಟರ್, ಪ್ರಿಯಾಂಕಾ ಪ್ರಮಾಣವಚನ ಸ್ವೀಕಾರ ; ಅಭಿವೃದ್ಧಿ ನಿರೀಕ್ಷೆಯಲ್ಲಿ ಮತದಾರ
ನವದೆಹಲಿ : 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಪ್ರಾರಂಭವಾಗಿದೆ. ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಬೆಳಗಾವಿ ಸಂಸದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಹಾಗೂ ಚಿಕ್ಕೋಡಿ ಸಂಸದೆ ಪ್ರಯಾಂಕಾ ಜಾರಕಿಹೊಳಿ
ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.
ನೂತನ ಸಂಸದರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ಕೇಂದ್ರ ಸಚಿವರಾದ ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದರು.
ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆದ್ದು ಲೋಕಸಭೆಗೆ ಆಯ್ಕೆಯಾದ ಪ್ರಿಯಾಂಕಾ ಜಾರಕಿಹೊಳಿ ಕಡಿಮೆ ವಯಸ್ಸಿನಲ್ಲೇ ಸಂಸತ್ತಿಗೆ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನೂ ಬೆಳಗಾವಿಯಿಂದ ಗೆದ್ದ ಜಗದೀಶ್ ಶೆಟ್ಟರ್ ಮೊದಲಬಾರಿಗೆ ಸಂಸದರಾಗಿ ಪ್ರಮಾಣವಚನ ಪಡೆದುಕೊಂಡರು.
ಚಿಕ್ಕೋಡಿ ಹಾಗೂ ಬೆಳಗಾವಿಯ ನೂತನ ಸಂಸದರ ಮೇಲೆ ಎರಡೂ ಕ್ಷೇತ್ರದ ಜನ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೂಲಭೂತ ಸೌಕರ್ಯ, ಉದ್ಯೋಗ ಸೇರಿದಂತೆ ಕೇಂದ್ರದ ಯೋಜನೆಗಳನ್ನು ತರುತ್ತಾರೆ ಎಂಬ ನಿರೀಕ್ಷೆಯಲ್ಲಿ ಜನರಿದ್ದು ಜನರ ನಂಬಿಕೆ ಉಳಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕು.