Select Page

Advertisement

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ಸಂಸದ ಜಗದೀಶ್ ಶೆಟ್ಟರ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ಸಂಸದ ಜಗದೀಶ್ ಶೆಟ್ಟರ್

ಬೆಳಗಾವಿ : 15 ವರ್ಷದ ಬಾಲಕಿ ಮೇಲೆ ಅತ್ಯಾಚಾರಗಿದ ವೀಡಿಯೋ ಇಟ್ಟುಕೊಂಡು ನಿರಂತರ ಲೈಂಗಿಕ ಕಿರುಕುಳ ನೀಡಿರುವ ಕೃತ್ಯ ಬೆಳಗಾವಿ ನಗರದಲ್ಲಿ ನಡೆದಿದ್ದು ಅತ್ಯಂತ ಹ್ಯೇಯ ಕೃತ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ಹೊರಹಾಕಿದರು.‌

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಪುಂಡರಿಗೆ ಪೊಲೀಸರ ಮತ್ತು ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ. ಸಮಾಜದ ಸ್ವಾಸ್ಥ್ಯ ಕದಡುವ ಇಂತಹ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿ ಕುಳಿತಿರುವುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ.

ಮಹಿಳೆಯರ ಸಬಲೀಕರಣಕ್ಕೆ ಸರ್ಕಾರಿ ಬಸ್ ನಲ್ಲಿ ಉಚಿತ ಪಯಣ ಪ್ರತಿ ತಿಂಗಳು ಗೃಹಲಕ್ಷ್ಮಿಯ ಹಣ ಹಾಕಿದರೆ ಸಾಲದು, ಮನೆಯ ಮಹಾಲಕ್ಷ್ಮಿಯರಾದ ಹೆಣ್ಣು ಮಕ್ಕಳನ್ನು ಇಂತಹ ಕಾಮುಕರಿಂದ ರಕ್ಷಿಸುವುದು ಅತ್ಯಂತ ಮಹತ್ವದ ಸಂಗತಿ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸುವುದು ಅತ್ಯಂತ ಅವಶ್ಯಕ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.



Advertisement

Leave a reply

Your email address will not be published. Required fields are marked *

error: Content is protected !!