ಶೆಟ್ಟರ್ ಗೆ ಕರೆ ಮಾಡಿ ಐಫೋನ್ ಕೇಳಿದ ಕಾಂಗ್ರೆಸ್ ಕಾರ್ಯಕರ್ತ ; ಹಿರಿಯ ನಾಯಕನಿಗೆ ಕೈನಿಂದ ಅಗೌರವ
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ. ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿರುವ ಕಾಂಗ್ರೆಸ್ ಕಾರ್ಯಕರ್ತನೋರ್ವ IPhone ಕೊಡಿಸುವಂತೆ ಮಾತನಾಡಿರುವ ವೀಡಿಯೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ರಾಮದುರ್ಗ ಮೂಲದ ಪ್ರತೀಕ್ ಮಲಜಿ ಎಂಬ ಕಾಂಗ್ರೆಸ್ ಕಾರ್ಯಕರ್ತ ಹಿರಿಯ ರಾಜಕಾರಣಿ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಅಗೌರವಿಸುವ ರೀತಿಯಲ್ಲಿ ಮಾತನಾಡಿ ನಂತರ ಅದನ್ನು ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ.
ಸಧ್ಯ ಈ ಕುರಿತು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಜೊತೆಗೆ ಒಬ್ಬ ಹಿರಿಯ ರಾಜಕಾರಣಿಗೆ ಕಾಂಗ್ರೆಸ್ ಯಾವ ರೀತಿಯಲ್ಲಿ ಗೌರವ ಕೊಡುತ್ತದೆ ಎಂಬುದು ಈ ಘಟನೆಯಿಂದ ತಿಳಿಯುತ್ತದೆ ಎಂದು ಶೆಟ್ಟರ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

