ಯುಗಾದಿ ಶುಭ ದಿನವೇ ಜಗದೀಶ್ ಶೆಟ್ಟರ್ ಗೃಹ ಪ್ರವೇಶ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ನಗರದಲ್ಲಿ ಹೊಸ ಮನೆ ಪ್ರವೇಶ ಮಾಡಿದ್ದಾರೆ.
ಮಂಗಳವಾರ ಯುಗಾದಿ ದಿನದ ಶುಭ ಸಂದರ್ಭದಲ್ಲಿ ನಗರದ ಕುಮಾರಸ್ವಾಮಿ ಲೇಔಟ್ ನಲ್ಲಿ ಬಾಡಿಗೆ ಮನೆ ಗೃಹ ಪ್ರವೇಶ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶೆಟ್ಟರ್ ಕುಟುಂಬದವರು ಹಾಗೂ ಅವರ ಅಭಿಮಾನಿಗಳು ಜೊತೆಗಿದ್ದರು.
ಒಟ್ಟಿನಲ್ಲಿ ಬೆಳಗಾವಿ ಲೋಕಸಭಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಶೆಟ್ಟರ್ ವಿರುದ್ಧ ಕಾಂಗ್ರೆಸ್ ನಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಕಣಕ್ಕೆ ಇಳಿದಿದ್ದಾರೆ.


