28 ಕ್ಕೆ ಬೆಳಗಾವಿಯಲ್ಲಿ ಮೋದಿ ಕಾರ್ಯಕ್ರಮ ; ಸಮಯ ಬದಲಾವಣೆ
ಬೆಳಗಾವಿ : ಬರುವ ಏಪ್ರಿಲ್ 27 ರಂದು ರಾತ್ರಿ ಬೆಳಗಾವಿ ನಗರದಲ್ಲಿ ವಾಸ್ತವ್ಯ ಹೂಡಲಿರುವ ಪ್ರಧಾನಿ ನರೇಂದ್ರ ಮೋದಿ 28 ರಂದು ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಹೇಳಿದರು.
ನಗರದಲ್ಲಿ ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ಮೋದಿ ಸಮಾವೇಶದ ಸಮಯ ಬದಲಾವಣೆ ಆಗಿದ್ದು, 28 ಕ್ಕೆ ನಗರದ ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಲಕ್ಷಾಂತರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿರಬೇಕು ಎಂದು ಮನವಿ ಮಾಡಿದರು.
ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್. ಇದು ದೇಶದ ದೃಷ್ಟಿಯಿಂದ ನಡೆಯುತ್ತಿರುವ ಚುನಾವಣೆ. ಈ ಬಾರಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಸಂಕಲ್ಪವನ್ನು ದೇಶದ ಜನ ಮಾಡಿದ್ದಾರೆ ಎಂದರು.
ಮಹಿಳೆಯರಿಗೆ ವಿಶೇಷವಾಗಿ ಮೋದಿ ಅನೇಕ ಯೋಜನೆ ತಂದಿದ್ದಾರೆ. ನಿರಂತರ ಕುಡಿಯುವ ನೀರಿನ ಜಲಜೀವನ್ ಮಿಷನ್, ಗೃಹ ಬಳಕೆ ಸಿಲಿಂಡರ್ ನೀಡುವ ಉಜ್ವಲ ಯೋಜನೆ, ಹೆಣ್ಣುಮಕ್ಕಳಿಗಾಗಿ ಶೌಚಾಲಯ ನಿರ್ಮಾಣದಂತ ಯೋಜನೆ ಫಲವಾಗಿ ಸಮಸ್ತ ಮಹಿಳೆಯರಿಗೆ ಅನುಕೂಲ ಆಗಿದೆ ಎಂದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಹನುಮಂತ ಕೊಂಗಾಲಿ ಸೇರಿದಂತೆ ಮುಂತಾವವರು ಉಪಸ್ಥಿತರಿದ್ದರು.


