ಬಿಜೆಪಿ ಮತ್ತೊಂದು ವಿಕೆಟ್ ಪತನ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ
ಹುಬ್ಬಳ್ಳಿ / ಧಾರವಾಡ : ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್ ಬೈ ಹೇಳಿದ್ದು ಭಾನುವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಈ ಕುರಿತು ನಗರದಲ್ಲಿ ನಡೆದ ಸುದ್ದಿಘೋಷ್ಠಿ ಉದ್ದೇಶಸಿ ಮಾತನಾಡಿದ ಇವರು. ಬಿಜೆಪಿ ಪಕ್ಷದಿಂದ ಟಿಕೆಟ್ ಕೈ ತಪ್ಪಿದ್ದು ನಾನು ಶಾಸಕನಾಗಿ ಕೆಲಸ ಮಾಡುವ ಉತ್ಸಾಹ ಹೊಂದಿದ್ದು, ಬಿಜೆಪಿಗೆ ರಾಜೀನಾಮೆ ಸಲ್ಲಿಸಿ ಚುನಾವಣೆ ಎದುರಿಸುವೆ ಎಂದು ಹೇಳಿದ್ದಾರೆ.
ಈಗಾಗಲೇ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನಿರಾಕರಣೆ ಮಾಡಿದೆ. ಜೊತೆಗೆ ಸ್ಥಳೀಯವಾಗಿ ಕೆಲಸ ಮಾಡಿದ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡುವ ಮಾತನಾಡಿದ್ದು, ಶೆಟ್ಟರ್ ಅವರಿಗೆ ಉತ್ತಮ ಸ್ಥಾನಮಾನ ಕೊಡುವ ಭರವಸೆ ನೀಡಿತ್ತು.
ಬಿಜೆಪಿ ಹೈಕಮಾಂಡ್ ಕೊಟ್ಟ ಮನವಿ ತಿರಸ್ಕರಿಸಿರುವ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ. ಒಂದು ಹಂತದಲ್ಲಿ ಬಿಜೆಪಿಗೆ ಈ ಎಲ್ಲಾ ಆಯಾಮ ಗೊತ್ತಿದ್ದರು ಕೊನೆ ಕ್ಷಣದಲ್ಲಿ ಟಿಕೆಟ್ ನಿರಾಕರಣೆ ಮಾಡಿ ಹೊಸ ರಣತಂತ್ರ ಮಾಡಿದ್ದು ವಿಶೇಷ.