
Video – ಜೈನಮುನಿ ಹತ್ಯೆ ಪ್ರಕರಣ ; ಆಶ್ರಮಕ್ಕೆ ಸಿಐಡಿ ಅಧಿಕಾರಿಗಳು ಭೇಟಿ

ಚಿಕ್ಕೋಡಿ : ಬರ್ಬರವಾಗಿ ಹತ್ಯೆಯಾಗಿದ್ದ ಹಿರೇಕೋಡಿ ನಂದಿ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಆಶ್ರಮಕ್ಕೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರ ಜೈನಮುನಿ ಹತ್ಯೆ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿದ್ದರು. ಹಿರೇಕೊಡಿ ಆಶ್ರಮಕ್ಕೆ ಮಂಗಳವಾರ ಸಿಐಡಿ ಐಜಿ ಪ್ರವೀಣ ಮಧುಕರ ಪವಾರ್, ಎಫ್‌ಎಸ್‌ಎಲ್ ನಿರ್ದೇಶಕ ಧರ್ಮೇಂದ್ರ ಕುಮಾರ್, ಮೀನಾ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿದೆ.
ಅಧಿಕಾರಿಗಳು ಹತ್ಯೆಯಾದ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿಗಳ ಕೋಣೆ ಪರಿಶೀಲನೆ ನಡಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.