ಸೂಸೈಡ್ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗುವೆ ; ಸಚಿವ ಜಮೀರ್
ಬೆಂಗಳೂರು : ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಿದ್ದೇನೆ.ಸುಸೈಡ್ ಬಾಂಬ್ ಕಟ್ಟಿಕೊಂಡು ಪಾಕಿಸ್ತಾನದ ಜೊತೆ ಯುದ್ಧಕ್ಕೆ ಹೋಗಿವೆ. ಪ್ರಧಾನಿ ಮೋದಿ ಅವಕಾಶ ಕಲ್ಪಿಸಲಿ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.
ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ ಇವರು. ಕೇಂದ್ರ ಸರಕಾರ ಪಾಕ್ ವಿರುದ್ಧ ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ. ನಮ್ಮ ಪಕ್ಷದ ಬೆಂಬಲವನ್ನೂ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ್ದಾರೆ ಎಂದು ಹೇಳಿದರು.
ನಾನು ಬೇರೆ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಮಗೆ ದೇಶ ಮುಖ್ಯ. ನಾನು ಯುದ್ಧಕ್ಕೆ ಹೋಗಲು ಸಿದ್ಧನಿದ್ದೇನೆ ಎಂದು ಅಭಿಪ್ರಾಯಪಟ್ಟರು.


