ಕಾಶ್ಮೀರದಲ್ಲಿ ಉಗ್ರರ ದಾಳಿ ; ಸಾವಿನ ಸಂಖ್ಯೆ 27 ಕ್ಕೆ ಏರಿಕೆ
ಜಮ್ಮುಕಾಶ್ಮೀರ : ಜಮ್ಮುಕಾಶ್ಮೀರದ ಪಹಲ್ಗಾಮದಲ್ಲಿ ( Pahalgam ) ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದು, ಸಾವಿನ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ.
ಹಿಂದೂಗಳನ್ನೇ ಟಾರ್ಗೆಟ್ ಮಾಡಿರುವ ಉಗ್ರರು 30 ಜನ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದು, ಧರ್ಮ ಕೇಳಿ ಅವರ ಮೇಲೆ ಅಟ್ಯಾಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಉಗ್ರರ ಗುಂಡಿನ ದಾಳಿಯಲ್ಲಿ ಕರ್ನಾಟಕ ಇಬ್ಬರು ಹತ್ಯೆಯಾಗಿದ್ದಾರೆ. ಶಿವಮೊಗ್ಗ ಹಾಗೂ ಹಾವೇರಿ ಮೂಲದ ಇಬ್ಬರು ಸಾವಣಪ್ಪಿದ್ದಾರೆ. ಇದರಲ್ಲಿ ಮಾಜಿ ಸ್ಪೀಕರ್ ಕೋಳಿವಾಡ ಅವರ ಸಂಬಂಧಿ ಇದ್ದಾರೆ ಎಂದು ತಿಳಿದುಬಂದಿದೆ.


