Select Page

Advertisement

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ ; ಮರಳಿ ಜೈಲು ವಾಸ

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ ; ಮರಳಿ ಜೈಲು ವಾಸ

ಬೆಂಗಳೂರು : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಈ ಹಿನ್ನೆಲೆಯಲ್ಲಿ ಹೈದರಾಬಾದ್‌ ಸಮೀಪದ ಚಂಚಲಗುಡ ಜೈಲಿರುವ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಇದೀಗ ಅವರು ಶಾಸಕ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅದಿಕೃತ ಆದೇಶ ಹೊರ ಬಿದ್ದಿದೆ.

ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್ 7 ವರ್ಷಗಳ ಶಿಕ್ಷೆ ನೀಡಿತ್ತು. ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್ ಮುಂದೆ ಅಂಗಲಾಚಿ ಬೇಡಿಕೊಂಡಿದ್ದರು.

ಆದರೆ ಕೋರ್ಟ್ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ 6 ವರ್ಷಗಳ ಕಾಲ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿದೆ.


Advertisement

Leave a reply

Your email address will not be published. Required fields are marked *

error: Content is protected !!