ಜಪಾನ್ : ಜಪಾನ್ ದೇಶದ ಪೂರ್ವ ಪ್ರಧಾನಿ ಶಿಂಬೊ ಅಬೆ ಮೇಲೆ ಗುಂಡಿನ ದಾಳಿ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಜಪಾನ್ ನ ನಾರಾ ನಗರದಲ್ಲಿ ಚುನಾವಣೆ ಹಿನ್ನಲೆಯಲ್ಲಿ ಭಾಷಣ ಮಾಡುತ್ತಿದ್ದ ಶಿಂಬೊ ಅಬೆ ಮೇಲೆ ಗುಂಡು ಹಾರಿಸಲಾಗಿದೆ. ಶಂಕಿತ ಹಂತಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಜಪಾನ್ ನ ಎನ್ ಎಚ್ ಕೆ ವರದಿ ಮಾಡಿದೆ.