ಶೀಘ್ರದಲ್ಲೇ 2,454 ಪೊಲೀಸ್ ಹುದ್ದೆಗಳಿಗೆ ನೇಮಕಾತಿ
ಬೆಂಗಳೂರು : ರಾಜ್ಯದಲ್ಲಿ ಖಾಲಿ ಇರುವ 2,454 ಪೊಲೀಸ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ. ಸಿಸಿಬಿ ಬಲಪಡಿಸಲು 230 ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ನಿರ್ಧಾರ ಮಾಡಲಾಗಿದೆ. ಹಾಗೂ ಖಾಲಿ ಇರುವ ಪೊಲೀಸ್ ಹುದ್ದೆ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದರು.
ಪೊಲೀಸ್ ಇಲಾಖೆ ಸುಧಾರಣೆ ನಿಟ್ಟಿನಲ್ಲಿ ಹಲವು ಕ್ರಮಗಳಿಗೂ ಸಿಎಂ ಮುಂದಾಗಿದ್ದಾರೆ. ಬೆಂಗಳೂರು ನಗರದಲ್ಲಿ 6 ಹೊಸ ಮಹಿಳಾ ಪೊಲೀಸ್ ಠಾಣೆ ನಿರ್ಮಾಣ. ಹಾಗೂ ಹೊಸದಾಗಿ 5 ಸಂಚಾರಿ ಠಾಣೆ ತೆರೆಯಲು ಸರ್ಕಾರ ನಿರ್ಧರಿಸಿದೆ.


