Select Page

Advertisement

ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಸೌಲಭ್ಯ ; ಸಿಎಂ ಮಹತ್ವದ ನಿರ್ಧಾರ

ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಸೌಲಭ್ಯ ; ಸಿಎಂ ಮಹತ್ವದ ನಿರ್ಧಾರ
Advertisement

ಬೆಂಗಳೂರು : ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ.

ಗ್ರಾಮೀಣ ಪತ್ರಕರ್ತರ ಉಚಿತ ಬಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ.

ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ.

ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ/ ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ.

ದಿನಾಂಕ 21/03/2024ರಲ್ಲಿದ್ದಂತೆ ಮಾಧ್ಯಮ ಪಟ್ಟಿಯಲ್ಲಿರುವ ಮುದ್ರಣ/ ವಿದ್ಯುನ್ಮಾನ ಮಾಧ್ಯಮಗಳ ಸಂಖ್ಯೆಯನ್ನಾಧರಿಸಿ, ರಾಜ್ಯಾದ್ಯಂತ ಒಟ್ಟು 5222 ಪತ್ರಕರ್ತರಿಗೆ ಈ ಯೋಜನೆಯನ್ನು ಒದಗಿಸಲು, ಕೆಎಸ್‌ಆರ್‌ಟಿಸಿ ಸಂಸ್ಥೆಯು ನೀಡಿರುವ ಅಂದಾಜಿನಂತೆ, ಪತಿ ಪಾಸುದಾರರಿಗೆ ಪ್ರತಿ ತಿಂಗಳಿಗೆ ರೂ. 2500 ಗಳಾಗಬಹುದೆಂದು ವೆಚ್ಚವನ್ನು ಅಂದಾಜಿಸಿಲಾಗಿದೆ ಎಂದು ತಿಳಿಸಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!