ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನ ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
ಬೆಳಗಾವಿ: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ( 84 ) ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುದೀರ್ಘ ಕಾಲ ಇಸ್ರೋ ಅಧ್ಯಕ್ಷರಾಗಿ ಅನುಪಮ ಸೇವೆ ಸಲ್ಲಿಸಿದ್ದ ಕಸ್ತೂರಿ ರಂಗನ್ ನಿಧನ ದೇಶಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ದಯಪಾಲಿಸಲಿ ಎಂದು ಹೆಬ್ಬಾಳಕರ್ ಪ್ರಾರ್ಥಿಸಿದ್ದಾರೆ.

