ಸಿದ್ದರಾಮಯ್ಯ ಸರಕಾರದ ಎರಡನೇ ವಿಕೆಟ್ ಪತನ ; ಸಚಿವ ರಾಜಣ್ಣ ರಾಜೀನಾಮೆ ಅಂಗೀಕಾರ
ಬೆಂಗಳೂರು : ಸಿದ್ದರಾಮಯ್ಯ ಸರಕಾರದ ಎರಡನೇ ವಿಕೆಟ್ ಪತನವಾಗಿದ್ದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜಣ್ಣ ಅವರ ರಾಜೀನಾಮೆ ಪಡೆಯುವುದಕ್ಕಿಂತ ರಾಜ್ಯಾಲರಿಗೆ ವಜಾ ಮಾಡುವಂತೆ ಪತ್ರ ಬರೆಯಲು ಸೂಚನೆ ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಇನ್ನೂ ಕೆಲ ಸಮಯದ ವರೆಗೆ ರಾಜಣ್ಣ ರಾಜೀನಾಮೆಗೆ ಹಿಂದೇಟು ಹಾಕುತ್ತಿರುವ ವೇಳೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಪಕ್ಷದಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದರು, ಇದರಿಂದ ಸಚಿವ ರಾಜಣ್ಣ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮತದಾರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ಅಕ್ರಮದ ಕುರಿತು ಕೇಂದ್ರ ಹಾಗೂ ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಆರೋಪ ಮಾಡಿದ ನಂತರ ಸಿದ್ದರಾಮಯ್ಯ ಸಂಪುಟದ ಸಚಿವರೇ ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಹೇಳಿಕೆ ನೀಡಿದ್ದರು.
ಕಳೆದ ಲೋಕಸಭಾ ಚುನಾವಣೆ ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ರಾಜ್ಯದಲ್ಲಿ ನಮ್ಮದೇ ಸರಕಾರ ಆಡಳಿತದಲ್ಲಿತ್ತು. ಈ ಸಂದರ್ಭದಲ್ಲಿ ನಾವು ಸರಿಯಾಗಿ ನೋಡಿಕೊಳ್ಳಬಹುದಾಗಿತ್ತು ಎಂಬ ಹೇಳಿಕೆಯನ್ನು ರಾಜಣ್ಣ ನೀಡಿದ್ದರು. ಇದರಿಂದ ಸರಕಾರಕ್ಕೆ ಮುಜುಗರ ಉಂಟಾಗಿತ್ತು.


