ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನಲೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ದಿಢೀರ್ ಸುದ್ದಿಘೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರಪ್ಪ. ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಉದ್ದೇಶದಿಂದ ನಾನು ನಾಳೆ ಸಂಜೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.