Select Page

ಸಿಎಂ ಮಾಧ್ಯಮ ಸಲಹೆಗಾರ  ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂದನಾ ಸಮಾರಂಭ

ಸಿಎಂ ಮಾಧ್ಯಮ ಸಲಹೆಗಾರ  ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂದನಾ ಸಮಾರಂಭ

ಬೆಳಗಾವಿ : ಪತ್ರಿಕಾರಂಗವು ಸಮಾಜ ತಿದ್ದುವ ಪಾತ್ರ ನಿರ್ವಹಿಸುತ್ತಿದೆ. ಸಮಾಜದಲ್ಲಿ ತೊಂದರೆ, ಸಮಸ್ಯೆಗಳಿದ್ದಲ್ಲಿ ಅಂತಹ ಕಡೆ ಬೆಳಕು ಚೆಲ್ಲುವ ಕೆಲಸಕ್ಕೆ ಮಾಧ್ಯಮ ಮುಂದಾಗಬೇಕು. ಪತ್ರಕರ್ತರು ತಮ್ಮ ವರದಿಗಳಿಂದ ವೃತ್ತಿ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕಿವಿಮಾತು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ನಗರದ ಕನ್ನಡ ಭವನದಲ್ಲಿ ಭವನದಲ್ಲಿ ಶನಿವಾರ  ನಡೆದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದಿನ ಎಲೆಕ್ಟ್ರಾನಿಜ್ ಹಾಗೂ ಡಿಜಿಟಲ್ ಮಾಧ್ಯಮಗಳು ಸುದ್ದಿ ಭರಾಟೆ ಹೆಚ್ಚಾಗಿದ್ದು, ಮೂಲ ಸುದ್ದಿಯ ಸ್ವರೂಪವೇ ಬದಲಾಗಿ ಕೆಲವೊಮ್ಮೆ ಬೇರೆಯದೇ ಅರ್ಥ ಮೂಡಿಸುತ್ತಿದೆ. ಆದ್ದರಿಂದ ಮೂಲ ಸುದ್ದಿ ಅಥವಾ ಹೇಳಿಕೆಗಳು ಯಥಾವತ್ತಾಗಿ ವರದಿಯಾಗಬೇಕು ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ಪ್ರಭಾಕರ್. ಬೆಳಗಾವಿ ಜಿಲ್ಲೆ ಅತೀ ವಿಶೇಷವಾದ ಜಿಲ್ಲೆಯಾಗಿದೆ. ಇಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಿರುವುದು ಸಂತಸದ ವಿಷಯ. ಈ ಅಭಿನಂದನಾ ಕಾರ್ಯಕ್ರಮವನ್ನು ಎಲ್ಲ ಪತ್ರಕರ್ತ ಮಿತ್ರರಿಗೆ ಅರ್ಪಿಸುತ್ತೇನೆ ಎಂದು ಹೇಳಿದರು.

ಪತ್ರಕರ್ತರಿಗೆ ನಿವೇಶನ ಮೀಸಲಿಡುವುದು ಹಾಗೂ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.
ಮಾಧ್ಯಮ ಪ್ರತಿನಿಧಿಗಳ ಪ್ರತಿನಿಧಿಯಾಗಿ ಸರಕಾರದ ಮಟ್ಟದಲ್ಲಿ ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸ್ಪಂದಿಸುತ್ತೇನೆ ಎಂದು ಕೆ. ಪ್ರಭಾಕರ ಅವರು ತಿಳಿಸಿದರು.

ನಿವೃತ್ತ ಪತ್ರಕರ್ತರ ಮಾಶಾಸನ 10 ರಿಂದ 12 ಸಾವಿರ ಹೆಚ್ಚಳ ಮಾಡಲಾಗಿದೆ. ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದ ಬಡಾವಣೆಯಾದ ಕಣಬರ್ಗಿಯಲ್ಲಿ ನಿವೇಶನ ಮಂಜೂರು ಮಾಡಲು ಸದ್ಯದಲ್ಲೇ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ಗೌರವಿಸಿ, ಅಭಿನಂದಿಸಲಾಯಿತು. ಇದೇ ವೇಳೆ ಮುಖ್ಯಮಂತ್ರಿಗಳ ಕಚೇರಿಯ ಗಿರಿಶ್ ಕೆ., ಕೆ.ಪಿ.ಪುಟ್ಟಸ್ವಾಮಯ್ಯ, ದೀಪಕ್ ಕರಾಡೆ ಅವರನ್ನು ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಕರ್ತವ್ಯಾಧಿಕಾರಿ ಎಂ.ಕೆ.ಹೆಗಡೆ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ವಿವಿಧ ಪತ್ರಿಕೆಯ ಜಿಲ್ಲಾ ವರದಿಗಾರರು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರನ್ನೂ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕ. ಕಾ.ಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ,‌‌‌ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಸರ್ವೋತ್ತಮ ಜಾರಕಿಹೊಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪತ್ರಿಕಾ ಭವನ ನಿರ್ಮಾಣಕ್ಕೆ ಭರವಸೆ – ಪತ್ರಕರ್ತರು ತಮ್ಮ ಕುಟುಂಬ ಮಕ್ಕಳ ವಿದ್ಯಾಭ್ಯಾಸಗಳತ್ತ ಗಮನಹರಿಸಬೇಕು. ಬೆಳಗಾವಿ ನಗರದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳ ಜತೆಗೆ ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದೆ. ಸ್ಥಳ ಗೊಂದಲವಿರುವ ಕಾರಣ ವಿಳಂಬವಾಗಿದೆ. ಸ್ಥಳ ನಿಗದಿಯಾದ ತಕ್ಷಣವೇ ಭವನ ನಿರ್ಮಾಣಕ್ಕೆ ಸೂಚಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ
ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

Advertisement

Leave a reply

Your email address will not be published. Required fields are marked *

error: Content is protected !!