Select Page

Advertisement

ಕಾಗವಾಡ : ಹೃದಯಾಘಾತದಿಂದ ಶಾಲೆಯಲ್ಲೇ ಶಿಕ್ಷಕ ಸಾವು

ಕಾಗವಾಡ : ಹೃದಯಾಘಾತದಿಂದ ಶಾಲೆಯಲ್ಲೇ ಶಿಕ್ಷಕ ಸಾವು

ಕಾಗವಾಡ : ಶಾಲೆಯಲ್ಲೇ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಮಂಗಸೂಳಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ನಡೆದಿದೆ.

ಶಾಲೆಯ ಸಮಾಜ-ವಿಜ್ಞಾನ ಶಿಕ್ಷಕ ಭರತ ಶಿಂಧೆ (47) ಬೆಳಿಗ್ಗೆ ಶಾಲಾ ಆವರಣಕ್ಕೆ ಬರುತ್ತಲೇ ಎದೆ ನೋವು ಕಾಣಿಸಿಕೊಂಡಿದೆ ಶಾಲೆಯ ಇನ್ನುಳಿದ ಶಿಕ್ಷಕರು ಅವರನ್ನು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಶಿಕ್ಷಕ ಮೂಲತಃ ರಾಯಬಾಗ ತಾಲ್ಲೂಕಿನ ಬಿರಡಿ ಗ್ರಾಮದವರಾಗಿದ್ದು ಈ ಮೊದಲು ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮುಂಬಡ್ತಿ ಪಡೆದು ಪ್ರೌಢ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು,ಇವರಿಗೆ ಪತ್ನಿ,ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!