ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ
ಅಥಣಿ : ಮಾಜಿ ಡಿಸಿಎಂ ಲಕ್ಷ್ಮಣ ಅವದಿ ಆಪ್ತ ಹಾಗೂ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಾಗವಾಡ ತಾಲೂಕಿನ ಖಿಳೆಗಾಂವ ಗ್ರಾಮದಲ್ಲಿ ನಿನ್ನೆ ನಡೆದಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖೀಳೆಗಾಂವ ಗ್ರಾಮದಲ್ಲಿ ಬುಧವಾರ ಸಂಜೆ ನಡು ರಸ್ತೆಯಲ್ಲಿ ಆರು ಜನರ
ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು ಅಣ್ಣಪ್ಪ ಬಸಪ್ಪ ನಿಂಬಾಳ (58) ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕೊಲೆಯಾದ ವ್ಯಕ್ತಿ ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷನಾಗಿದ್ದ, ಸ್ಥಳಕ್ಕೆ ಅಥಣಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.