ಬೆಳಗಾವಿ : ಹೃದಯಾಘಾತದಿಂದ ಪಿಎಸ್ಐ ಖೋತ್ ನಿಧನ
ಚಿಕ್ಕೋಡಿ : ತೀವ್ರ ಹೃದಯಾಘಾತದಿಂದ ಕಾಗವಾಡ ಪೊಲೀಸ್ ಠಾಣೆಯ ಹೆಚ್ಚುವರಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಖೋತ್ ಶನಿವಾರ ಸಾವನ್ನಪ್ಪಿದ್ದಾರೆ.
ರಾಯಭಾಗದಲ್ಲಿ ಗಣೇಶೋತ್ಸವದ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಸುರೇಶರನ್ನು ಕೂಡಲೇ ಮಿರಜ್ ನಗರದ ಆಸ್ಪತ್ರೆಗೆ ರವಾನಿಸಲಾಯಿತು.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಪಿಎಸ್ಐ ಸುರೇಶ್ ಖೋತ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.


