ಅಂಬಿಗರ ಚೌಡಯ್ಯ ಪ್ರತಿಮೆ ಭಗ್ನ : ಆರೋಪಿಗಳ ಗಡಿಪಾರಿಗೆ ಅಂದೋಡಗಿ ಆಗ್ರಹ
ಕಲಬುರಗಿ ‘ ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬಿಗರ ಚೌಡಯ್ಯ ಮೂರ್ತಿ ಭಗ್ನ ಮಾಡಿದ್ದು, ಜಿಲ್ಲೆಯಲ್ಲೀಗ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ-ಶಹಬಾದ್ ರಸ್ತೆ ತಡೆದು ಭಂಕೂರು ಕ್ರಾಸ್ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ ಆರೋಪಿಗಳನ್ನು ಗಡಿಪಾರು ಮಾಡುವಂತೆ ಕರ್ನಾಟಕ ಜನಸೈನ್ಯದ ಅಫಜಲಪುರ ತಾಲೂಕು ಅಧ್ಯಕ್ಷ ಉಮೇಶ ಎಸ್, ಅಂದೋಡಗಿ ಆಗ್ರಹಿಸಿದ್ದಾರೆ.


