Select Page

Advertisement

ಮದುವೆ ಸಮಾರಂಭದಲ್ಲಿ ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ..!

ಮದುವೆ ಸಮಾರಂಭದಲ್ಲಿ ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ..!



ಕಲಬುರಗಿ: ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಆಪ್ತ ಹಾಗೂ ಬಲಗೈ ಬಂಟನೆಂದು ಹೇಳಲಾಗುತ್ತಿರುವ ಅಫಜಲಪುರದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ಕಲಬುರಗಿ ನಗರದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಕೈಯಲ್ಲಿ ಗನ್ ಹಿಡಿದು ‘ಧುಲಂದರ್’ ಹಾಡಿಗೆ ಡ್ಯಾನ್ಸ್ ಮಾಡಿ ಪೋಸ್ ನೀಡಿದ ಘಟನೆ ನಡೆದಿದೆ.

ಸಮಾರಂಭದ ವೇಳೆ ಕೈಯಲ್ಲಿ ಗನ್ ಹಿಡಿದು ವೇದಿಕೆಯ ಮೇಲೆ ಕುಣಿದು ಬಿಲ್ಡಪ್ ನೀಡಿದ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಲಬುರಗಿ ನಗರದಲ್ಲಿ ನಡೆದ ಈ ಮದುವೆ ಸಮಾರಂಭದಲ್ಲಿ ಅನೇಕ ಅತಿಥಿಗಳು ಉಪಸ್ಥಿತರಿದ್ದು, ಅವರ ಎದುರಲ್ಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮದುವೆ ಕಾರ್ಯಕ್ರಮದಲ್ಲಿ ಸಂಗೀತದ ನಡುವೆಯೇ ಗನ್ ಹಿಡಿದು ವೇದಿಕೆಯ ಮೇಲೆ ಕುಣಿದಿರುವುದು ಹಾಗೂ ಕೆಲವರು ಅವರೊಂದಿಗೆ ಫೋಟೋ ಮತ್ತು ವೀಡಿಯೊಗಳನ್ನು ತೆಗೆದುಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿವೆ. ಈ ಘಟನೆಯ ವೀಡಿಯೊಗಳು ಈಗ ವ್ಯಾಪಕವಾಗಿ ವೈರಲ್ ಆಗಿವೆ.

Advertisement

Leave a reply

Your email address will not be published. Required fields are marked *

error: Content is protected !!