
ಕನ್ನಡದ ಹಿರಿಯ ನಟ ದ್ವಾರಕೀಶ್ ನಿಧನ

ಬೆಂಗಳೂರು : ಕನ್ನಡದ ಹಿರಿಯ ನಟ ಹಾಗೂ ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ.
81 ವರ್ಷ ವಯಸ್ಸಿನ ದ್ವಾರಕೀಶ್ ಅವರು ಹಲವು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಹಿಡಿಯ ನಟ ಡಾ. ವಿಷ್ಣುವರ್ಧನ್ ಅವರ ಜೊತೆ ಉತ್ತಮ ಒಡನಾಟ ಹೊಂದಿದ್ದ ಇವರು ಕನ್ನಡದ ಕುಳ್ಳ ಎಂದೇ ಖ್ಯಾತಿ ಹೊಂದಿದ್ದರು.
ದ್ವಾರಕೀಶ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.